ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ.ಅದೃಷ್ಟವಶಾತ್ ಇಂದು ಮಕ್ಕಳಿಗೆ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಹೌದು ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲೆಯ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಸ್ಪೋಟಗೊಂಡಿದೆ.
ಮುಂಜಾಗ್ರತಕ್ಕ ಕ್ರಮವಾಗಿ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿತ್ತು. ಹಾಗಾಗಿ ಶಾಲೆಯಲ್ಲಿಯೇ ಬ್ಯಾಗ್ ಬಿಟ್ಟು ಮಕ್ಕಳಿಗೆ ಮನೆಗೆ ತೆರಳುವಂತೆ ಸೂಚನೆ ನೀಡಲಾಗಿತ್ತು. ಘಟನೆ ಕುರಿತಂತೆ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.