ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಭೇಟಿ
ಇಂದು ಬೆಳಗ್ಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿದರು. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿದ ಡಿಕೆಶಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು.
ಯಡಿಯೂರಪ್ಪ ನಿವಾಸಕ್ಕೂ ಭೇಟಿ ನೀಡಿ ಆಹ್ವಾನ
ಸಿದ್ದರಾಮಯ್ಯ ಅವರ ಭೇಟಿಯ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಅವರು ನೇರವಾಗಿ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಧಾವಿಸಿದರು. ಯಡಿಯೂರಪ್ಪ ಅವರಿಗೆ ಆಮಂತ್ರಣ ಪತ್ರಿಕೆ ಹಸ್ತಾಂತರಿಸಿದ ನಾಯಕರು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.
#WATCH | Karnataka CM designate DK Shivakumar meets Former PM & JD(S) National President HD Deve Gowda ahead of being sworn in as the CM later today.
(Source: DK Shivakumar's Office) pic.twitter.com/k6b7bOP1Pt
— ANI (@ANI) June 3, 2026








