ರಾಮನಗರ : ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತ ಕನಸು ಕಾಣಬೇಕು ಅಷ್ಟೇ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದು, ಮಾದಪ್ಪನ ಆಣೆಗು ಹೇಳುತ್ತೇನೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಾಗೆ ಆಗುತ್ತಾರೆ ಎಂದು ತಿಳಿಸಿದರು.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಅಂತ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದರು. ಗ್ಯಾರಂಟಿ ಯೋಜನೆಗಳು ಕೊಡಲು ಸಾಧ್ಯವಿಲ್ಲ ಅಂತ ಹೇಳಿದ್ದರು. ಕೊಟ್ಟ ಮಾತಿನಂತೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದರು.
ಅಳಲ್ದೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ 140 ಸೀಟುಗಳನ್ನು ಗೆದ್ದು ಸರ್ಕಾರ ರಚಿಸುತ್ತೇವೆ. ಮಾದಪ್ಪನ ಆಣೆಗೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಹೇಳಿಕೆ ನೀಡಿದರು.