ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನದಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಆರು ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಈಶ್ವರ ನಗರದ ಮುಸ್ಲಿಂ ಕುಟುಂಬದ ಸುಮಾರು ಎಂಟು ಜನರು ಪ್ರವಾಸಕ್ಕೆ ಎಂದು ದಾಂಡೇಲಿ ಗೆ ತೆರಳಿದ್ದರು. ಈ ವೇಳೆ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿತ್ತು. ಈ ವೇಳೆ ಮಗು ಒಂದು ಆಕಸ್ಮಿಕವಾಗಿ ನದಿಗೆ ಬಿದ್ದಿತ್ತು ಈ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರಂತೆ ಆರು ಜನ ನದಿಯಲ್ಲಿ ಹೋಗಿದ್ದಾರೆ.ಹಾಗಾಗಿ ಆರು ಜನರು ನಿರುಪಾಲಾಗಿ ಇದೀಗ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕುಟುಂಬದ ಒಟ್ಟು ಎಂಟು ಜನರು ಪ್ರವಾಸಕ್ಕೆ ಎಂದು ತೆರಳಿದ್ದರು.ಕಾಳಿ ನದಿಯಿಂದ ಇದೀಗ ಪೊಲೀಸರು ಆರು ಮೃತ ದೇಹವನ್ನು ಹೊರ ತೆಗೆದಿದ್ದು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಆರು ಶವಗಳನ್ನು ಸ್ಥಳಾಂತರಿಸಲಾಗಿದೆ.ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.