Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಜಿತ್ ಪವಾರ್ ವಿಮಾನ ಅಪಘಾತದ ನಂತರ 400 ಅನಿಯಂತ್ರಿತ ವಾಯುನೆಲೆಗಳ ಪರಿಶೀಲನೆ ಆರಂಭಿಸಿದ ಕೇಂದ್ರ ಸರ್ಕಾರ

09/02/2026 6:54 AM

BREAKING : ರಾಜ್ಯದಲ್ಲಿ ಕರಾಳ ರವಿವಾರ : ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಯಲ್ಲಿ 12 ಜನ ದುರ್ಮರಣ!

09/02/2026 6:52 AM

BREAKING: ಜಪಾನ್ ಚುನಾವಣೆಯಲ್ಲಿ ಸನಾಯೆ ತಕೈಚಿ ಹ್ಯಾಟ್ರಿಕ್ ವಿಜಯ |

09/02/2026 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕರಾಳ ರವಿವಾರ : ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಯಲ್ಲಿ 12 ಜನ ದುರ್ಮರಣ!
KARNATAKA

BREAKING : ರಾಜ್ಯದಲ್ಲಿ ಕರಾಳ ರವಿವಾರ : ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಯಲ್ಲಿ 12 ಜನ ದುರ್ಮರಣ!

By kannadanewsnow0509/02/2026 6:52 AM

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಕರಾಳ ರವಿವಾರವಾಗಿತ್ತು. ಹೌದು ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 12 ಜನರು ಸಾವನಪ್ಪಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ, ಬೀದರ್ ಕೋಲಾರದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ.

ಲಾರಿ ಹರಿದು ಗರ್ಭಿಣಿ ಸಾವು!

ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

ಕೃಷಿಹೊಂಡದಲ್ಲಿ ಮೀನು ಹಿಡಿಯಲು ಹೋಗಿಓರ್ವ ಬಾಲಕ ಸೇರಿ ಇಬ್ಬರು ನೀರು ಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಂದುರಾಯನ ಪಾಳ್ಯದಲ್ಲಿ ನಡೆದಿದೆ.ಚಂದುರಾಯನ ಪಾಳ್ಯದಲ್ಲಿ ಮೀನು ಹಿಡಿಯಲು ಹೋಗಿ ಶಂಕರ್ (32) ಹಾಗೂ ಬಾಲಕ ಮೋಹಿತ್ (17) ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

ಆಟೋ ಡಿಕ್ಕಿ ಆಗಿ ಸ್ಕೂಟಿಯಲ್ಲಿ ತೆರುಳುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಕಬ್ಬಿಣ ಸೇತುವೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಆಟೋ ಡಿಕ್ಕಿಯಾಗಿ ಉದ್ದೆಗೌಡ (68) ಎನ್ನುವ ವೃದ್ಧರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ. ವೇಗವಾಗಿ ಬಂದಂತಹ ಆಟೋ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಸದ್ಯ ಪೋಲಿಸರ ವಶಕ್ಕೆ ಪಡೆದುಕೊಂಡಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು!

ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ನಾಗರಾಜು (68) ಹಾಗು ವೆಂಕಟರೆಡ್ಡಿ (50) ಮೃತ ದುರ್ದೈವಿಗಳು ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸುಮಾರು 200 ಮೀಟರ್ ವರೆಗೂ ಎಳೆದೊಯ್ದಿದೆ. ಅಪಘಾತ ನಂತರ ಕಾರು ನಿಲ್ಲಿಸಿ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಅಪಘಾತದ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ನಾಗಣ್ಣ ಕ್ರಾಸ್ ಬಳಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಮಗಳು ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ ಕರಟ್ಮಲ್ (40) ಪತ್ನಿ ಶಿಲ್ಪ (35) ಹಾಗೂ ಅವರ ಪುತ್ರಿ ರಕ್ಷಿತ (12) ಸ್ಥಳದಲ್ಲೆ ಸಾವನಪ್ಪಿದ್ದಾರೆ. ಇನ್ನು ಮಗ ದಿಗಂಬರ್ (15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ನಿಂದರಾಜೇಶ್ವರ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ ನಾಲ್ವರು ಒಂದೇ ಬೈಕ್ನಲ್ಲಿ ಬರುವಾಗ ಈ ಅಪಘಾತ ಸಂಭವಿಸಿದೆ.

ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಮುನಿಯಮ್ಮ ವೆಂಕಟಪ್ಪ ಸೇರಿ ಮೂವರು ಸಾವನಪ್ಪಿದ್ದಾರೆ.ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಹತ್ತಿರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಈ ಒಂದು ದುರಂತ ಸಂಭವಿಸಿದೆ ಅಪಘಾತದ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ALERT : ಉಸಿರಾಟದ ವೇಳೆ ಮಹಿಳೆಯ ಶ್ವಾಸಕೋಶಕ್ಕೆ ಜಾರಿದ `ಮೂಗುತ್ತಿ’ : ಎಕ್ಸ್ ರೇ ನೋಡಿದ ವೈದ್ಯರೇ ಶಾಕ್.!

09/02/2026 6:44 AM1 Min Read

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಜಸ್ಟ್ ಹೀಗೆ ಮಾಡಿ.!

09/02/2026 6:35 AM2 Mins Read

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

09/02/2026 6:18 AM2 Mins Read
Recent News

ಅಜಿತ್ ಪವಾರ್ ವಿಮಾನ ಅಪಘಾತದ ನಂತರ 400 ಅನಿಯಂತ್ರಿತ ವಾಯುನೆಲೆಗಳ ಪರಿಶೀಲನೆ ಆರಂಭಿಸಿದ ಕೇಂದ್ರ ಸರ್ಕಾರ

09/02/2026 6:54 AM

BREAKING : ರಾಜ್ಯದಲ್ಲಿ ಕರಾಳ ರವಿವಾರ : ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಯಲ್ಲಿ 12 ಜನ ದುರ್ಮರಣ!

09/02/2026 6:52 AM

BREAKING: ಜಪಾನ್ ಚುನಾವಣೆಯಲ್ಲಿ ಸನಾಯೆ ತಕೈಚಿ ಹ್ಯಾಟ್ರಿಕ್ ವಿಜಯ |

09/02/2026 6:49 AM

ಸಿಂಧೂ ಒಪ್ಪಂದಕ್ಕೆ ಬ್ರೇಕ್: ಚಿನಾಬ್ ನದಿಯಲ್ಲಿ ಮೋದಿ ಸರ್ಕಾರದ ಮೆಗಾ ಪ್ರಾಜೆಕ್ಟ್ ಆರಂಭ!

09/02/2026 6:44 AM
State News
KARNATAKA

BREAKING : ರಾಜ್ಯದಲ್ಲಿ ಕರಾಳ ರವಿವಾರ : ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಯಲ್ಲಿ 12 ಜನ ದುರ್ಮರಣ!

By kannadanewsnow0509/02/2026 6:52 AM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಕರಾಳ ರವಿವಾರವಾಗಿತ್ತು. ಹೌದು ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 12…

ALERT : ಉಸಿರಾಟದ ವೇಳೆ ಮಹಿಳೆಯ ಶ್ವಾಸಕೋಶಕ್ಕೆ ಜಾರಿದ `ಮೂಗುತ್ತಿ’ : ಎಕ್ಸ್ ರೇ ನೋಡಿದ ವೈದ್ಯರೇ ಶಾಕ್.!

09/02/2026 6:44 AM

ALERT : ನೀವು `ಸಿಗರೇಟ್, ಗುಟ್ಕಾ’ ಚಟ ಬಿಡಬೇಕಾ? ಜಸ್ಟ್ ಹೀಗೆ ಮಾಡಿ.!

09/02/2026 6:35 AM

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

09/02/2026 6:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.