ಬೆಂಗಳೂರು: ಕೊಲೆ ಪ್ರಕರಣದ ಆರೋಪದ ಮೇಲೆ ಸದ್ಯ ಬೆಂಗಳೂರಿನ ಕೇಂದ್ರ ಕಾರಗೃಹದಲ್ಲಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಸದ್ಯ ಮತ್ತೆ ಜೈಲಿನಲ್ಲೇ ಕಾಲ ಕಳೆಯ ಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.
ಇಂದು ದರ್ಶನ್ ಅಂಡ್ ಗ್ಯಾಂಗ್ ಕಸ್ಟಡಿ ಅವಧಿ ಅಂತ್ಯವಾಗಿತ್ತು, ಈ ಹಿನ್ನಲೆಯಲ್ಲಿ ಇಂದು ಮತ್ತೆ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಪರೇನ್ಸ್ ಮೂಲಕ ಆರೋಪಿಗಳನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶವನ್ನು ಹೊರಡಿಸಿದರು. ಇಂದು ದರ್ಶನ್ ಹಾಗೂ ಅವರ ಗ್ಯಾಂಗ್ನ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದಿತ್ತು. ಈ ನಡುವೆ ಪ್ರಕರಣದ ತನಿಖೆ ಶುರುವಾಗಿ ತಿಂಗಳು ಕಳೆದಿದೆ. ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದ್ದಾರೆ