ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಲಾಗಿದೆ.
ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಸಹ ಆರೋಪಿಗಳು ಸಲ್ಲಿಸಿದ್ದ ಜೈಲು ವರ್ಗಾವಣೆ ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಮುಂದೂಡಿದೆ. ಜತೆಗೆ, ಪವಿತ್ರಾ ಗೌಡ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಈ ನಡುವೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಲಾಗಿದೆ.
ಇದೇ ವೇಳೆ, ಪವಿತ್ರಾ ಗೌಡ ಪರ ವಕೀಲರು ಸ್ಟ್ಯಾಚುಟರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ ಅನ್ನು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಸಲಾಗಿದ್ದು, ಹೊಸ ಬಿಎನ್‌ಎಸ್‌ಎಸ್ ಕಾಯ್ದೆ ಅಡಿಯಲ್ಲಿ ಸಲ್ಲಿಸಿಲ್ಲ ಎಂದು ವಕೀಲ ಬಾಲನ್ ವಾದಿಸಿದರು. ಈ ವಾದಕ್ಕೆ ಪ್ರತಿಕ್ರಿಯೆ ನೀಡಲು ವಕೀಲರು ಸಮಯ ಕೋರಿದ್ದರಿಂದ ನ್ಯಾಯಾಲಯ ಈ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.