ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಹೈಕೋರ್ಟಿನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ನಟ ದರ್ಶನ್ ಗೆ ಜೈಲಿನಿಂದ ಸಂಕಷ್ಟಗಳು ತಪ್ಪುತಿಲ್ಲ. ಈಗಾಗಲೇ ಹೈ ಕೋರ್ಟ್ ಆದೇಶವನ್ನು ಪ್ರಶ್ನೆಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈಗ ಪೊಲೀಸರು ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿದ್ದಾರೆ.
ಹೌದು ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ತಮ್ಮ ಬಳಿಯಿರುವ ಗನ್ ಲೈಸೆನ್ಸ್ ಬಗ್ಗೆ 1 ವಾರದಲ್ಲಿ ಸ್ಪಷ್ಟನೆ ನೀಡುವಂತೆ ಡಿಸಿಪಿ ಪದ್ಮಿನಿ ಸಾಹು ನೋಟಿಸ್ ನೀಡಿದ್ದಾರೆ. ಅಲ್ಲದೆ ಕೋರ್ಟ್ ಸಹ ನಟ ದರ್ಶನ್ ಅವರಿಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‌ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.