ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜ್ಯಾತಿಥ್ಯ ವಿಚಾರವಾಗಿ, ಜಿ.ಪರಮೇಶ್ವರ್ ಅವರು ಜೈಲಾಧಿಕಾರಿ ಸೇರಿದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೆ ನಟ ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಜೈಲಿನಲ್ಲಿ ನಟ ದರ್ಶನ್ ರೌಡಿಶೀಟರ್ ಗಳ ಜೊತೆ ಇರುವ ಫೋಟೋ ಪತ್ತೆಯಾಗಿದೆ.ವಿಷಯ ತಿಳಿದ ಕೂಡಲೇ ಜೈಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನಾ ಜೊತೆಗೆ ದರ್ಶನ್ ಇರುವ ಫೋಟೋ ಪತ್ತೆಯಾಗಿದೆ. ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಎಂದರು.
ಪ್ರಕರಣದ ಕುರಿತಂತೆ ಜೈಲಿನ ಹಿರಿಯ ಅಧಿಕಾರಿಗಳ ಕುರಿತು ತನಿಖೆ ನಡೆಯುತ್ತಿದೆ. ನಿರ್ಲಕ್ಷ ಕಂಡು ಬಂದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧವು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಯಾರೇ ತಪ್ಪು ಮಾಡಿದ್ದರು ಕ್ರಮ ಕೈಗೊಳ್ಳುತ್ತೇವೆ. ಡಿಜಿ ಮತ್ತು ಐಜಿಪಿ ಕೂಡ ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಪ್ರಕರಣ ಸಂಬಂಧ ಸಂಪೂರ್ಣ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.