ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಪೊಲೀಸರು ವಿಜಯಲಕ್ಷ್ಮೀಗೆ ನೋಟಿಸ್ ನೀಡಿದ್ದಾರೆ.
ವಿಜಯಲಕ್ಷ್ಮೀಗೆ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ BNSS 164ಅಡಿ ಹೇಳಿಕೆ ದಾಖಲು ಮಾಡಲು ಸಿಸಿಬಿ ಸೈಬರ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲು ಮಾಡಲು ವಿಜಯಲಕ್ಷ್ಮೀಗೆ ನೋಟಿಸ್ ಜಾರಿ ಮಾಡಲಾಗಿದ್ದು, ಶುಕ್ರವಾರ ಕೋರ್ಟ್ ಗೆ ಹಾಜರಾಗುವಂತೆ ತಿಳಿಸಲಾಗಿದೆ.








