ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ದೂರು ಕೊಡುತ್ತಿದ್ದಂತೆ ಬೆದರಿದ ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಹಾಗೂ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮೆಸೇಜುಗಳನ್ನು ಸಹ ಇದೀಗ ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಅಶ್ಲೀಲ ಮೆಸೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಡಿಲೀಟ್ ಮಾಡಿದ್ದಾರೆ. 18 ಇನ್ಸ್ಟಾಗ್ರಾಮ್ ಖಾತೆಗಳ ಕುರಿತು ವಿಜಯಲಕ್ಷ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಅವರಿಗೆ ಕಮಿಷನರ್ ಗೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಅಕೌಂಟ್ ಗಳ ಪರಿಶೀಲನೆ ವೇಳೆ ಕೆಲವು ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.








