ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಮೈಸೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಸೇರಿ ನಂದಿ ದ್ವಜಕ್ಕೆ ಪೂಜೆ ನೆರವೇರಿಸಿದರು.
ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಈಡುಗಾಯಿ ಒಡೆಯುವ ಮೂಲಕ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರೆಯ ಶುಭಾಶಯಗಳು.
ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ರೈತರಲ್ಲಿ ನೆಮ್ಮದಿ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ಹಾರೈಸುತ್ತೇನೆ.
ಇಂದು ದುಷ್ಟ ಶಕ್ತಿಗಳ ಸಂಹಾರ ಮಾಡಿದ ದಿನ ರಾಜ ಕಾಲದಿಂದಲೂ ಈ ಒಂದು ದಸರಾ ಆಚರಣೆ ಸಂಪ್ರದಾಯ ನಡೆದುಕೊಂಡು ಬಂದಿದೆ ಈ ಬಾರಿ ರಾಜ್ಯದಲ್ಲಿ ಮಳೆ ಮತ್ತು ಮಳೆ ಚೆನ್ನಾಗಿ ಆಗಿದೆ ಎಲ್ಲಾ ಜಿಲ್ಲೆಗಳಲ್ಲೂ ಚೆನ್ನಾಗಿ ಮಳೆಯಾಗಿದೆ ಈ ಬಾರಿ ಎಲ್ಲಾ ಜಲಾಶಯಗಳು ತುಂಬಿವೆ ಯಾವ ಜಿಲ್ಲೆಯಲ್ಲೂ ಕೂಡ ಬರಗಾಲ ಇಲ್ಲ ಎಂದು ನಂದಿ ದ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದರು.