ನವದೆಹಲಿ : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಡೆಯುತ್ತಿದೆ. ಈ ವರ್ಷ, ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯಲಿದೆ. ಅದ್ರಂತೆ, ಚುನಾವಣಾ ಆಯೋಗ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಚುನಾವಣಾ ದಿನಾಂಕಗಳನ್ನ ಪ್ರಕಟಿಸಲಾಗುತ್ತಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರು ಉತ್ಸಾಹದಿಂದ ಮತ ಚಲಾಯಿಸಿದ್ದು, ಸುಮಾರು 10 ವರ್ಷಗಳ ನಂತರ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಮತದಾನವಾಗುವ ನಿರೀಕ್ಷೆಯಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ಆಗಸ್ಟ್ 28 ರಂದು ಅಧಿಸೂಚನೆ ಹೊರಡಿಸಲಾಗುವುದು. ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ನಡೆಯಲಿದೆ. ಸೆ.29ರಂದು ಎರಡನೇ ಹಂತದ ಅಧಿಸೂಚನೆ ಹೊರಬೀಳಲಿದ್ದು, ಸೆ.25ರಂದು ಮತದಾನ ನಡೆಯಲಿದೆ. ಮೂರನೇ ಹಂತದ ಮತದಾನ ಅಕ್ಟೋಬರ್ 1 ರಂದು ನಡೆಯಲಿದ್ದು, ಇನ್ನು ಅಕ್ಟೋಬರ್ 4 ರಂದು ಚುನಾವಣಾ ಫಲಿತಾಂಶ ಬಹಿರಂಗಗೊಳ್ಳಲಿದೆ.
ಹರಿಯಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಜೊತೆಗೆ ಅಕ್ಟೋಬರ್ 4 ರಂದು ಚುನಾವಣಾ ಫಲಿತಾಂಶ ಬಹಿರಂಗಗೊಳ್ಳಲಿದೆ.
ಭಾರತದಲ್ಲಿರುವ ‘ಮುಸ್ಲಿಂ’ರು ಕೂಡ ‘ಹಿಂದೂ’ಗಳೇ : ಹರಿಹರ ಪೀಠದ ವಚನಾನಂದಶ್ರೀ ಅಚ್ಚರಿಯ ಹೇಳಿಕೆ!