ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಬಾಗಲಕೋಟೆ ವಿಧಾನಸಭೆ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ನ ಉಮೇಶ್ ಮೇಟಿ ಮುನ್ನಡೆ 11 ಸಾವಿರ ಮತಗಳ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆ ಸಾಧಿಸಿದ್ದಾರೆ.








