ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾಲ್ತುಳಿತ ದುರಂತ ನೆನೆದು ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರು ಕಾಲ್ತುಳಿತ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾವು ಆಡಳಿತಾತ್ಮಕ ಪಾಠ ಕಲಿಯಬೇಕು, ಪ್ರತಿಪಕ್ಷಗಳು ಮೃತ ದೇಹಗಳ ಮೇಲೆ ರಾಜಕೀಯ ಮಾಡಲಿ. ಅವರು ಎಷ್ಟು ಮೃತ ದೇಹಗಳ ಮೇಲೆ ರಾಜಕೀಯ ಮಾಡಿದ್ದಾರೆಂದು ನಾನು ಪಟ್ಟಿ ಮಾಡುತ್ತೇನೆ. ಆದರೆ ಚಿಕ್ಕ ಮಕ್ಕಳನ್ನು ನೋಡುವುದು ನೋವುಂಟು ಮಾಡುತ್ತದೆ. ಅವರ ನೋವನ್ನು ನಾನು ನೋಡಿದ್ದೇನೆ” ಎಂದು ಹೇಳಿದ್ದಾರೆ.
ಮೃತಪಟ್ಟವರು ಎಳೆ ವಯಸ್ಸಿನವರು, ನೋವಿನ ಘಟನೆ ಆಗಿದೆ. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ಆಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಮೃತಪಟ್ಟವರು ಅತ್ಯಂತ ಎಳೆ ವಯಸ್ಸಿನವರು, ಅವರ ಕುಟುಂಬದವರ ಕಣ್ಣೀರು ನೋಡುವುದಕ್ಕೆ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.
#WATCH | Bengaluru: Karnataka DCM DK Shivakumar breaks down as he comes out to address the media for the first time after the #BengaluruStampede. pic.twitter.com/1GDMZOBAm4
— ANI (@ANI) June 5, 2025