ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಸ್ಕೂಟರ್ ಓಡಿಸಿ ಗಮನ ಸೆಳೆದರು.
ಇಂದು ಬೆಳಗ್ಗೆ ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಬಳಿಕ ಹೊಸ ಫ್ಲೈಓವರ್ ಮೇಲೆಯೇ ಡಿಕೆಶಿ ಸ್ಕೂಟರ್ ರೈಡ್ ಮಾಡಿ ಖುಷಿ ಪಟ್ಟರು.
ಡಿಕೆಶಿಯವರು ಈ ವೇಳೆ ಕಾರ್ಯಕರ್ತರೊಬ್ಬರ ಡಿಯೋ ಸ್ಕೂಟರ್ ಅನ್ನು ತಾವೇ ಓಡಿಸಿಕೊಂಡು ಹೊಸ ಫ್ಲೈಓವರ್ ಮೇಲೆ ಒಂದು ರೌಂಡ್ ಹೋಗಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಂಡಿರುವ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಮೇಲ್ಸೇತುವೆ ಕಾಮಗಾರಿಯನ್ನು ಸಚಿವರಾದ ಬೈರತಿ ಸುರೇಶ್ ಅವರು, ಶಾಂತಿನಗರ ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ಅವರು ಮತ್ತು ಅಧಿಕಾರಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.