ಬೆಂಗಳೂರು : ಬೆಂಗಳೂರಿನ ರೈಲ್ವೆ ಹಳಿ ಮೇಲೆ ಯುವತಿಯ ಶವ ಪತ್ತೆಯಾಗಿದ್ದು, ರೈಲಿನಿಂದು ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಕೊಡಿಗೇಹಳ್ಳಿ ರೈಲ್ವೆ ಹಳಿ ಮೇಲೆ ಯುವತಿಯ ಶವ ಪತ್ತೆಯಾಗಿದ್ದು, ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಸ್ಥಳಕ್ಕೆ ಯಶವಂತಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.