ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಭಯಾನಕ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಎಣ್ಣೆ ನಶೆಯಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂನ ಈಸ್ಟ್ ವೆಸ್ಟ್ ಪಬ್ಲಿಕ್ ಶಾಲೆ ಸಮೀಪದಲ್ಲಿ ಈ ಅಪಘಾತ ಸಂಭವಿಸಿದ್ದು, ಮದ್ಯ ಸೇವನೆ ಮಾಡಿದ್ದ ಕಾರು ಚಾಲಕ ಸರಣಿ ಅಪಘಾತ ಮಾಡಿದ್ದಾನೆ. ಈ ವೇಳೆ ಬೈಕ್ ಸವಾರ ವಿನಯ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿ ಹರಿನಾಥ್ ಹಾಡಹಗಲೇ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದು, ಮಲ್ಲೇಶ್ವರಂ ಸಂಚಾರಿ ಠಾಣೆ ಪೊಲೀಸರು ಆರೋಪಿ ಹರಿನಾಥ್ ನನ್ನು ಬಂಧಿಸಿದ್ದಾರೆ.