ಬೆಂಗಳೂರು : ದರ್ಶನ್ ಫ್ಯಾನ್ಸ್ ಗಳಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ನಟ ಪ್ರಥಮ್ ಮತ್ತು ತೋಟದ ಮಾಲೀಕ ಮಹೇಶ್ ಗೆ ಇದೀಗ ಪೊಲೀಸರು ನೋಟಿಸ್ ನೀಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಪ್ರಥಮ್ ಮತ್ತು ಮಹೇಶ್ ಗೆ ನೋಟಿಸ್ ನೀಡಲಾಗಿದೆ.
ಪ್ರಕರಣ ಸಂಬಂಧ ಸಾಕ್ಷಿಗಳಿಂದ ಮಾಹಿತಿ ಪಡೆಯಲು ಪೊಲೀಸರು ಪ್ರಥಮ್ ಹಾಗೂ ಮಹೇಶ್ ಗೆ ನೋಟಿಸ್ ನೀಡಿದ್ದಾರೆ ಈ ಪ್ರಕರಣದ ಕುರಿತು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಿದ್ದಾರೆ ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ. ಜುಲೈ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದ ಬಳಿ ನಟ ಪ್ರಥಮ್ ಗೆ ಬೇಕರಿ ರಘು ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.