ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿದ್ದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಭರತ್ ಭೂಷಣ್ ಎಂಬುವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.
ಇದೀಗ ವರದಿಗಳ ಪ್ರಕಾರ ಈ ಒಂದು ಉಗ್ರರ ಗುಂಡಿನ ದಾಳಿಯಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು. ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು ತಿಳಿದುಬಂದಿದೆ.
ಈ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ನ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಉಗ್ರರ ದಾಳಿಯಲ್ಲಿ ಕನ್ನಡಿಗ, ಬೆಂಗಳೂರು ಮೂಲದ ಭರತ್ ಭೂಷಣ್ ಎಂಬುವರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.