Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿಗಣತಿಗೆ ನಿರ್ಧಾರ : CM ಸಿದ್ದರಾಮಯ್ಯ
KARNATAKA

BREAKING : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿಗಣತಿಗೆ ನಿರ್ಧಾರ : CM ಸಿದ್ದರಾಮಯ್ಯ

By kannadanewsnow5712/09/2025 12:21 PM

ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 10 ವರ್ಷದ ಹಿಂದೆ ಜಾತಿಗಣತಿ ನಡೆಸಲಾಗಿತ್ತು. ಈಗ ಮತ್ತೆ ಜಾತಿಗಣತಿ ನಡೆಸಲಾಗುತ್ತಿದೆ, ಅಸಮಾನತೆ ಉಳಿಯಲು ನಾವು ಬಿಡಬಾರದು. ಹೀಗಾಗಿ ಸಾಮಾಜಿಕ, ಶೈಕ್ಷಣಿಕ ವಲಯದಲ್ಲಿ ಸಮಾನ ಅವಕಾಶ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಎಲ್ಲಾ ಜನರಲ್ಲೂ ನಾನು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಲಾಗುವುದು, ಡಿಸೆಂಬ‌ರ್ ಒಳಗಾಗಿ ಸಮೀಕ್ಷೆ ಪೂರ್ಣಗೊಳ್ಳಲಿದೆ. 1.75 ಲಕ್ಷ ಮಂದಿ ಶಿಕ್ಷಕರನ್ನು ಈ ಸಮೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ. ಒಂದು ವೇಳೆ ಸಮೀಕ್ಷೆ ಸಮಯದಲ್ಲಿ ಮನೆಯಲ್ಲಿ ಇಲ್ಲದಿದ್ದರೆ ಆಯೋಗದ ಸಹಾಯವಾಣಿ 8050770004 ನ್ನು ಸಂಪರ್ಕಿಸಿ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ www.ksdckarnatakagovt.in ಮೂಲಕವೂ ಸಹ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿಕ್ಷಕರು ಸಮೀಕ್ಷೆ ಮಾಡುವ ಮೊದಲೇ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆಯ ಅರ್ಜಿ ಫಾರಂ ನೀಡುತ್ತಾರೆ. ಬೆಸ್ಕಾಂ ಸಿಬ್ಬಂದಿ ಮನೆಮನೆಗೆ ಸ್ಟಿಕರ್ ಅಂಟಿಸುತ್ತಾರೆ. ಮಾದರಿ ಸಮೀಕ್ಷೆಯ ಅರ್ಜಿ ಮೊದಲೇ ದೊರಕುವುದರಿಂದ ಸಮೀಕ್ಷೆಯ ಪ್ರಶ್ನೆಗಳಿಗೆ ಉತ್ತರ ನೀಡಲು ಅನುಕೂಲವಾಗಲಿದೆ. ಸುಮಾರು 2 ಕೋಟಿ ಮನೆಗಳಿಗೆ ಸಮೀಕ್ಷಾ ಸಿಬ್ಬಂದಿ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ಹೀಗಿದೆ ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸುದ್ದಿಗೋಷ್ಠಿಯ ಹೈಲೈಟ್ಸ್

ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆ. ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ ಎಂದರು.

ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ. 22 ಸೆಪ್ಟೆಂಬರ್ 2025 ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು ತೀರ್ಮಾನಿಸಿದ್ದಾರೆ. 175000 ಸರ್ಕಾರಿ ಶಾಲಾ ಶಿಕ್ಷಕರುಗಳನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ. 325 ಕೋಟಿ ವಿಶೇಷ ಭತ್ಯೆ ಆಗಲಿದೆ. ಸದ್ಯ 425 ಕೋಟಿ ಹಣ ಕೊಡುವುದಾಗಿ ಹೇಳಿದ್ದೇವೆ. ಹೆಚ್ಚಿನ‌ ಹಣದ ಅಗತ್ಯಬಿದ್ದರೆ ಕೊಡ್ತೀವಿ. ಮನೆ ಮನೆಗೂ ಕರೆಂಟ್ ಇದೆ. ಮೀಟರ್ ರೀಡರ್ ಗಳು jio tag ಮಾಡುವ ಜೊತೆಗೆ, 2 ಕೋಟಿ ಮನೆಗಳಿಗೆ ಪ್ರತ್ಯೇಕ ಗುರುತಿನ ನಂಬರ್ ನೀಡಿ ಸ್ಟಿಕ್ಕರ್ ಅಂಟಿಸಲಾಗುತ್ತದೆ ಎಂದರು.

ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲಿಗೆ ಲಿಂಕ್ ಮಾಡುವುದರ ಜೊತೆಗೆ, ಮೊಬೈಲ್ ಇಲ್ಲದ ಮನೆಗಳಿಗೂ ಹೋಗಿ ಸಮೀಕ್ಷೆ ನಡೆಸಲಿದ್ದಾರೆ. ಒಟ್ಟು 60 ಪ್ರಶ್ನೆಗಳನ್ನು ಫೈನಲ್ ಮಾಡಲಾಗಿದ್ದು ಈ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದು ಸಮೀಕ್ಷೆ ನಡೆಸಲಿದ್ದಾರೆ. ರಾಜ್ಯದ ಜನತೆ ಒಬ್ಬರೂ ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿಎಂ ವಿನಂತಿಸಿದರು.

ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಕೂಡ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. online ಮೂಲಕವೂ website ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆಯನ್ನು ಪ್ರತೀ ಮನೆಗೆ ತಲುಪಿಸುತ್ತಾರೆ. ಬಳಿಕ ಶಿಕ್ಷಕರು ಹೋಗುತ್ತಾರೆ. ಯಾರೂ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಜಾತಿ ಹೇಳಿಕೊಳ್ಳಲು ಕಷ್ಟ ಆದವರು ಸಹಾಯವಾಣಿಗೆ ಕರೆ ಮಾಡಿ ಜಾತಿ ಹೇಳಬಹುದು ಎಂದರು.

ಯಾವುದೇ ನ್ಯೂನ್ಯತೆಗಳು ಇಲ್ಲದಂತೆ, ಹಿಂದಿನ ಸಮೀಕ್ಷೆಗಳಲ್ಲಿ ಎದುರಾದ ಯಾವುದೇ ತಾಂತ್ರಿಕ ಸಮಸ್ಯೆ ಈ ಬಾರಿ ಇಲ್ಲದಂತೆ ಸಿದ್ಧತೆ ಮಾಡಿಕೊಂಡಿದ್ದೇವೆ. ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ ಎಂದರು.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ.

2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ.

• ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದರು.

• ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ.

• ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ದತ್ತಾಂಶ ಸರಿಯಾಗಿ ಗೊತ್ತಾದರೆ ಮಾತ್ರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ.

• ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ.

• ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ.

• ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.

• ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ.

• ತಾತ್ಕಾಲಿಕವಾಗಿ ರೂ.420ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು.

• ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು.

• ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.

• ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು.

• ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

• ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

• ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

BREAKING: Decision to conduct caste census again in the state: CM Siddaramaiah
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM1 Min Read

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM1 Min Read

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM2 Mins Read
Recent News

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM
State News
KARNATAKA

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

By kannadanewsnow0917/11/2025 10:11 PM KARNATAKA 1 Min Read

ಬೆಂಗಳೂರು: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ…

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam

17/11/2025 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.