ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸ್.ಎಂ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕೃಷ್ಣ ಅವರ ದಶಕಗಳ ಕೆಲಸವು ಕರ್ನಾಟಕದ ಅಭಿವೃದ್ಧಿಗೆ ಮತ್ತು ಬೆಂಗಳೂರು ತಾಂತ್ರಿಕ ಕೇಂದ್ರವಾಗಿ ರೂಪಾಂತರಗೊಳ್ಳಲು ಗಣನೀಯ ಕೊಡುಗೆ ನೀಡಿದೆ. ಈ ಕಷ್ಟದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಯಲ್ಲಿವೆ ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







