ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಂಸದ-ಶಾಸಕರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅದ್ರಂತೆ, ಜುಲೈ 2 ರಂದು ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.
ರಾಮ್ ಪ್ರತಾಪ್ ಎಂಬುವವರು ತಮ್ಮನ್ನು ಈ ಪ್ರಕರಣದಲ್ಲಿ ಭಾಗಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು ಎಂದು ದೂರಿನ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.
ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರಲ್ಲಿ ಈ ಪ್ರಕರಣವನ್ನ ಪ್ರಾರಂಭಿಸಿದ್ದರು.
ಈ ಪ್ರಕರಣದಲ್ಲಿ ರಾಮ್ ಪ್ರತಾಪ್ ಅವರನ್ನು ಪಕ್ಷಗಾರರನ್ನಾಗಿ ಸೇರಿಸುವ ಮನವಿಯನ್ನು ಗಾಂಧಿ ಅವರ ವಕೀಲ ಕಾಶಿ ಪ್ರಸಾದ್ ಶುಕ್ಲಾ ವಿರೋಧಿಸಿದರು, ಪ್ರತಾಪ್ ನೇರವಾಗಿ ಭಾಗಿಯಾಗಿಲ್ಲ ಎಂದು ಪ್ರತಿಪಾದಿಸಿದರು.
ಡಿ ಗ್ಯಾಂಗ್‌ಗೆ ಸಂಬಂಧಿಸಿದ ಸಿನಿಮಾ ಟೈಟಲ್‌ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು….!
BREAKING : ಷೇರುದಾರರಿಗೆ ಜಾಕ್ ಪಾಟ್ : ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, 23,850ಕ್ಕೆ ನಿಫ್ಟಿ ಏರಿಕೆ