ನವದೆಹಲಿ: ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಕೆಲವು ಸ್ಫೋಟಗಳಿಂದಾಗಿ, ಕಟ್ಟಡ ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾರ್ಖಾನೆಯು ಡಿಎಸ್ಐಡಿಸಿ ಬವಾನಾದ ಸೆಕ್ಟರ್ 2 ರಲ್ಲಿದೆ. ಒಟ್ಟು 17 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನಗಳು ನಡೆಯುತ್ತಿವೆ.