ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸತ್ಯೇಂದರ್ ಜೈನ್ ಅವರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಜೈನ್ ಅವರ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಮತ್ತು ತಕ್ಷಣವೇ ಶರಣಾಗುವಂತೆ ಕೇಳಿದೆ. ಅವರು ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ. ಜೈನ್ ಅವರಲ್ಲದೆ, ಸಹ ಆರೋಪಿಗಳಾದ ಅಂಕುಶ್ ಜೈನ್ ಮತ್ತು ವೈಭವ್ ಜೈನ್ ಅವರ ಜಾಮೀನು ಅರ್ಜಿಗಳನ್ನು ಸಹ ತಿರಸ್ಕರಿಸಲಾಗಿದೆ.