ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣ ಸಂಬಂಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.
ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣ ಸಂಬಂಧ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ರನ್ನು ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.