ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಶಾಸಕಿ ಕೆ ಕವಿತಾ ಅವರನ್ನು ಮಾರ್ಚ್ 26 ರವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ಇಡಿ ರಿಮಾಂಡ್ ಅನ್ನು ಮಾರ್ಚ್ 26 ರವರೆಗೆ ವಿಸ್ತರಿಸಿದೆ.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕವಿತಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ ಇದೀಗ ಮೂರು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.