ನವದೆಹಲಿ : ಜಾರಿ ನಿರ್ದೇಶನಾಲಯದ ದೂರಿನ ಮೇರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯವು ಫೆಬ್ರವರಿ 17 ರಂದು ಸಮನ್ಸ್ ಜಾರಿ ಮಾಡಿದೆ.
ದೆಹಲಿ ಮದ್ಯ ಅಬಕಾರಿ ನೀತಿ 2021-22ರಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಪಾಲಿಸದ ಕಾರಣ ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಿತು.
ಅಂದ್ಹಾಗೆ, ನವೆಂಬರ್ 2, 2023, ಡಿಸೆಂಬರ್ 22, 2023, ಜನವರಿ 3, 2024, ಜನವರಿ 18 ಮತ್ತು ಫೆಬ್ರವರಿ 2 ರಂದು ಜಾರಿ ನಿರ್ದೇಶನಾಲಯ ಹೊರಡಿಸಿದ ಐದು ಸಮನ್ಸ್ಗಳನ್ನು ಕೇಜ್ರಿವಾಲ್ ತಪ್ಪಿಸಿಕೊಂಡಿದ್ದಾರೆ.