ಮಧ್ಯಪ್ರದೇಶ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ಹೊರಟಿದ್ದ ಕರ್ನಾಟಕ ರೈತರನ್ನು ಇದೀಗ ಮಧ್ಯಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಪ್ರದೇಶದ ಭೂಪಾಲ್ ರೈಲು ನಿಲ್ದಾಣದಲ್ಲಿ ಕರ್ನಾಟಕದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆಗೆ ಹೊರಟಿದ್ದರು. ಕರ್ನಾಟಕದ ರೈತರನ್ನು ಮಧ್ಯಪ್ರದೇಶದ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆದರಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ಸಂಯುಕ್ತ ಕಿಸಾನ್ ಮೋರ್ಚ ಪ್ರತಿಭಟನೆಗೆ ಕರೆ ನೀಡಿದೆ.ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಮಂಗಳವಾರ ದಿಲ್ಲಿ ಚಲೋಗೆ ಕರೆ ನೀಡಿವೆ.
ಈ ಹಿನ್ನೆಲೆಯ ಲ್ಲಿ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾ ನ್ ಮನ್ಸೂರ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆ ಗಳು ಬೆಂಬಲ ನೀಡಿದ್ದು, ಕನಿಷ್ಠ 20 ಸಾವಿರ ರೈತರು ದೆಹಲಿ ಪ್ರವೇಶಿಸುವ ಯತ್ನ ಮಾಡಬಹುದು ಎಂಬ ಗುಪ್ತಚರ ಇಲಾಖೆ ಅಂದಾಜಿಸಿದೆ. ರೈತರು ಅಂಬಾಲ- ಶಂಭು, ಕನೌರಿ- ಜಿಂದ್ ಮತ್ತು ದಬಾವಲಿ ಗಡಿ ಮೂಲಕ ರಾಜಧಾನಿ ಪ್ರವೇಶಕ್ಕೆ ಯೋಜಿಸಿದ್ದಾರೆ.