ಬೆಂಗಳೂರು : ಕ್ರಿಮಿನಲ್ ಕೇಸ್ ಒಂದಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ 46ನೇ ಸಿಸಿಎಚ್ ಕೋರ್ಟ್ ಪಬ್ಲಿಕ್ ಟ್ರಾನ್ಸ್ಸಿಕ್ಯೂಟರ್ ಲತಾ ಎನ್ನುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕ್ರಿಮಿನಲ್ ಕೇಸ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ಲತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎಂ.ರಾಜರಾಮ್ ಎನ್ನುವವರಿಂದ 1,100 ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು ಎಂ ರಾಜಾ ಎನ್ನುವವರ ಬಳಿ 1100 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ದಾಳಿ ಮಾಡಿ ಲತಾ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.








