ಚಿಕ್ಕಮಗಳೂರು : ನಗರದಲ್ಲಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಬಾಲಕನನ್ನು ಹಿಂದೂ ಕಾರ್ಯಕರ್ತರು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ವಿಜಯಪುರ ಬಡಾವಣೆಯಲ್ಲಿ 16 ವರ್ಷದ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ್ದಾನೆ. ಬಾಲಕನ ಕೃತ್ಯ ಕಂಡು ಸ್ಥಳೀಯರು ಹಾಗೂ ಹಿಂದೂ ಕಾರ್ಯಕರ್ತರು ಬಾಲಕನಿಗೆ ಥಳಿಸಿ, ಪೊಲೀಸರಿಗೊಪ್ಪಿಸಿದ್ದಾರೆ.
ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಕೃತಿ ಮೆರೆದ ಬಾಲಕನ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನಿಗೆ ಥಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಬಾಲಕನ ತಾಯಿ ದೂರು ನೀಡಿದ್ದಾಳೆ. ಅಪ್ರಾಪ್ತ ಬಾಲಕನ ಮನಸ್ಥಿತಿ ಬಗ್ಗೆ ಸ್ಥಳೀಯರು ಆತಂಕ ಹೊರಹಾಕಿದ್ದಾರೆ. ಬಾಲಕ ಕೃತ್ಯಕ್ಕೆ ಬಳಸಿದ ಲೈಟರ್ ಹಾಗೂ ಸೆಂಟ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕ್ರಮಕ್ಕೆ ಮುಂದಾಗಿದ್ದಾರೆ.