ಹಾವೇರಿ : ರಾಜ್ಯದಲ್ಲಿ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಡೇಂಘಿ ಮಹಾಮಾರಿಗೆ ಮೊದಲ ಬಲಿಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದ ಮಹಿಳೆ ಡೇಂಘಿಗೆ ಸಾವನ್ನಪ್ಪಿದ್ದಾರೆ.
ಹೌದು ಮಹಾಮಾರಿ ಡೇಂಘಿಗೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯ (30) ಎಂಬ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ.ಹಾವೇರಿ ನಗರದ ಮಲ್ಲಾಡದ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಗೌಸಿಯ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು ಈ ವೇಳೆ ಚಿಕಿತ್ಸೆ ಫಲಿತದೆ ಗೌಸಿಯ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಇದೀಗ ವೈದ್ಯರ ವಿರುದ್ಧ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ.
ಇನ್ನು ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಡೇಂಘಿ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.