ಉತ್ತರಕನ್ನಡ : ರಾಜ್ಯದಲ್ಲಿ ಇದೀಗ ಡೇಂಗಿ ಪ್ರಕರಣಗಳ ಸಂಖ್ಯೆ ಜನರಿಂದ ದಿನಕ್ಕೆ ಹೆಚ್ಚು ತಿದ್ದು ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಡೇಂಗಿ ಸೋಂಕಿಗೆ ಬಲಿಯಾಗುತ್ತಿದ್ದವರ ಸಂಖ್ಯೆ ಕೂಡ ಹೆಚ್ಚುತ್ತಿದೆ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಡೇಂಗಿ ಸೋಂಕಿಗೆ ಮೊದಲ ಬಲಿಯಾಗಿರುವ ಪ್ರಕರಣ ವರದಿಯಾಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಸೊಂಕಿಗೆ ಮೊದಲ ಬಲಿಯಾಗಿದ್ದು ಡೆಂಘಿಯಿಂದ ಹರೇ ರಾಮ ಗೋಪಾಲ ಭಟ್ (32) ಸಾವನ್ನಪ್ಪಿದ್ದಾರೆ. ಅಂಕೋಲಾದ ಬಾವಿಕೇರಿ ನಿವಾಸಿ ಹರೇ ರಾಮ ಗೋಪಾಲ್ ಭಟ್ ಒಂದು ವಾರದಿಂದ ಬೆಳಗಾವಿಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಗಳ ಮೂಲಕ ಡಿಸಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆಗೆ ವಿಕಾಸ ಸೌಧದಲ್ಲಿ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸುತ್ತಿದ್ದಾರೆ. ಡೆಂಗ್ಹಿ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಡಿಸಿಗಳು ಡಿಎಚ್ಹೋಗಳ ಜೊತೆ ಆರೋಗ್ಯ ಸಚಿವ ಸಭೆ ನಡೆಸುತ್ತಿದ್ದಾರೆ ವಿಡಿಯೋ ಕಾನ್ಫರೆನ್ಸ್ ಗಳ ಮೂಲಕ ಡಿಸಿಗಳು ಹಾಗೂ ಡಿಎಚ್ ಅವರ ಜೊತೆ ಚರ್ಚೆ ನಡೆಸುತ್ತಿದ್ದಾರೆ.