ಬೆಂಗಳೂರು : ರಾಜ್ಯದಲ್ಲಿ ಡೆಂಗು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲಿ 153 ಪ್ರಕರಣಗಳು ಪತ್ತೆಯಾಗಿದ್ದು, ಅಲ್ಲದೆ ಇಂದು ಹಾಸನದಲ್ಲಿ 8 ವರ್ಷದ ಬಾಲಕಿ ಸಮೃದ್ಧಿ ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ನಗರದ 7 ಜೋನ್ ಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿವೆ. ಕಳೆದ 24 ಗಂಟೆಗಳಲ್ಲಿ 153 ಡೆಂಘಿ ಪ್ರಕರಣಗಳು ಪತ್ತೆಯಾಗಿದ್ದು,ಸದ್ಯದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 547 ಕ್ಕೆ ಡೆಂಘಿ ಪ್ರಕರಣಗಳು ಏರಿಕೆ ಕಂಡಿವೆ ಎಂದು ವರದಿಯಾಗಿದೆ.
ಈಗಾಗಲೇ ರಾಜ್ಯ ಆರೋಗ್ಯ ಇಲಾಖೆಯು ಡೆಂಗ್ಯೂ ಸೋಂಕನ್ನು ತಡೆಗಟ್ಟಲು ಹಲವಾರು ರೀತಿಯಲ್ಲಿ ಕ್ರಮ ಕೈಗೊಂಡಿದ್ದು, ಶಶಿ ವಾದಿನೇಶ್ ಗುಂಡು ರಾವ್ ಅವರು ಕೂಡ ಜಿಲ್ಲಾಧಿಕಾರಿಗಳ ಜೊತೆಗೆ ಹಾಗೂ ಎಲ್ಲಾ ಜಿಲ್ಲೆಯ ಡಿ ಎಚ್ ಓ ಗಳ ಜೊತೆ ಹೇಗೆ ವಿಡಿಯೋ ಕಾನ್ಫರೆನ್ಸ್ ಗಳ ಮೂಲಕ ಸಭೆ ನಡೆಸಿ ರೋಗ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.