ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಮಾಜಿ ಸಿಎಂ SMK ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ SMKಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು.
ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ
ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಗಮಿಸಿ ಗೌರವ ನಮನ ಸಲ್ಲಿಸುವ ವೇಳೆ SM ಕೃಷ್ಣ ಪಾರ್ಥಿವ ಶರೀರಕ್ಕೆ ನಮಿಸಿ ಕಣ್ಣೀರು ಹಾಕಿದರು. ತಮ್ಮ ರಾಜಕೀಯ ಗುರುವಿನ ಪಾರ್ಥಿವ ಶರೀರದ ಮುಂದೆ ಕಣ್ಣೀರಾಕಿ ವಾಪಸ್ಸಾದ ಘಟನೆ ನಡೆಯಿತು.