ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ, ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಅಗಲಿದ ನಾಯಕನಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಎಸ್ಎಮ್ ಕೃಷ್ಣ ಅವರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಗಣ್ಯರು ರಾಜಕೀಯ ನಾಯಕರು ಅವರ ಅಂತಿಮ ದರ್ಶನ ಪಡೆದು ಸಂತಾಪಸೂಚಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅವರ ಕಾಲಿಗೆ ನಮಿಸಿ ಕಣ್ಣೀರು ಹಾಕಿ ಸಂತಾಪ ಸೂಚಿಸಿದರು. ಏಕೆಂದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಎಂ ಕೃಷ್ಣ ಅವರು ಆಗಿದ್ದರು. ಅವರ ಗರಡಿಯಲ್ಲಿ ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದಿದ್ದಾರೆ. ಕಾಲಿಗೆ ನಮಸ್ಕರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡು ಬಂದಿತು. ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಭಾಗಿಯಾಗಿದ್ದರು.
ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ಎಸ್ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಸ ಎಂ ಕೃಷ್ಣ ಅವರ ನಿಧನದಿಂದ ರಾಜ್ಯ ಸರ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಆದೇಶ ಹೊರಡಿಸಿದೆ.