ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಆದರೆ ಯಾವಾಗ ಅಂತ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ನಾನೇನು ಹೇಳುವ ಅವಶ್ಯಕತೆ ಇಲ್ಲ ಎಂದರು. ಪವರ್ ಶೇರಿಂಗ್ ಬಗ್ಗೆ ಪಕ್ಷದಲ್ಲಿ ಏನು ಚರ್ಚೆ ಆಗಿತ್ತು ಎನ್ನುವುದು ಗೊತ್ತಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಶಾಸಕರ ಅಹವಾಲು ಕೇಳಿದ್ದಾರೆ.
ಯಾವ ಸಚಿವ ಸಚಿವರ ಬಗ್ಗೆ ಕೂಡ ದೂರು ಬಂದಿದೆ ಅವು ಗೊತ್ತಿಲ್ಲ. ಎಲ್ಲವನ್ನು ಹೈಕಮಾಂಡ್ ಸರಿ ಮಾಡುತ್ತದೆ ಹೊರಗಿನಿಂದ ಬಂದ ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ ಎನ್ನುವ ವಿಚಾರವಾಗಿ ಸಿದ್ದರಾಮಯ್ಯ ಈಗ ಕಾಂಗ್ರೆಸ್ ನಾಯಕರು ಅವರು ಜನಪ್ರಿಯ ನಾಯಕರು ಹಾಗಾಗಿ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಜನರಿಗೆ ಕೆಲಸ ಮಾಡಿಲ್ಲವಾ? ಇನ್ನು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಚಾರವಾಗಿ ಡಿಕೆ ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗರು, ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಆದರೆ ಯಾವಾಗ ಏನು ಗೊತ್ತಿಲ್ಲ ಎಂದು ತಿಳಿಸಿದರು