ಶಿವಮೊಗ್ಗ : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಭದ್ರಾವತಿ ನಗರದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಷಡಾಕ್ಷರಿ ಎಂಬುವರ ಫೇಸ್‌ಬುಕ್ ಖಾತೆಯಿಂದ ಸಿದ್ದರಾಮಯ್ಯ ಅವರ ವಿಡಿಯೊವೊಂದಕ್ಕೆ ಕಮೆಂಟ್ ಮಾಡಿದ್ದು, ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.