ಬೆಂಗಳೂರು : ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ದೂರು ನೀಡಲಾಗಿದೆ.
ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಅವರಿಗೆ ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ದೂರು ಸಲ್ಲಿಸಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ನಟ ಕಿಚ್ಚ ಸುದೀಪ್ ಅವರ ಫೇಕ್ ಫೋಟೋ ಬಳಕೆ ಮಾಡಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಎಕ್ಸ್ ನಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ನಟ ಸುದೀಪ ಮಾನಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಸ್ಟಾರ್ ವಾರ್ ಮಾಡಲು ನೇರ ಕಾರಣವಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.