BREAKING : ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ಮಸೂದೆ ಪಾಸ್‌

ಬೆಳಗಾವಿ : ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು.