ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ನಮ್ಮ ಮೆಟ್ರೋ `ಹಳದಿ’ ಮಾರ್ಗ ಉದ್ಘಾಟಿಸಲು ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಮಳೆಯ ನಡುವೆಯೂ ಪ್ರಧಾನಿ ಮೋದಿ ಕಣ್ತುಂಬಿಕೊಳ್ಳಲು ಜನರು ಕಾಯುತ್ತಿದ್ದಾರೆ. ಹೂ ಮಳೆ ಸುರಿಸಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಹಳದಿ ಮಾರ್ಗವು 19 ಕಿ.ಮೀ.ಗಿಂತ ಹೆಚ್ಚು ಮಾರ್ಗದ ಉದ್ದವನ್ನು ಮತ್ತು 16 ನಿಲ್ದಾಣಗಳನ್ನು ಒಳಗೊಂಡಿದೆ. ಇದು ದಕ್ಷಿಣ-ಮಧ್ಯ ಬೆಂಗಳೂರಿನಲ್ಲಿರುವ ಆರ್‌ವಿ ರಸ್ತೆ (ರಾಗಿಗುಡ್ಡ) ವನ್ನು ಬೊಮ್ಮಸಂದ್ರಕ್ಕೆ ಸಂಪರ್ಕಿಸುತ್ತದೆ, ಇದು ಸಾವಿರಾರು ದೈನಂದಿನ ಪ್ರಯಾಣಿಕರಿಗೆ ಪ್ರವೇಶವನ್ನು ಸುಧಾರಿಸುತ್ತದೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು, ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರು -ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.
VIDEO | Bengaluru: Prime Minister Narendra Modi (@narendramodi) arrives at Ragigudda Metro Station.
He is set to inaugurate Yellow Line of Bengaluru Metro today.
(Source: Third Party)
(Full video available on PTI Videos – https://t.co/n147TvqRQz) pic.twitter.com/sa7spYvvl0
— Press Trust of India (@PTI_News) August 10, 2025