ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದ ಚಿನ್ನಯ್ಯನಿಗೆ ಹಣ ನೀಡಿದವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಚಿನ್ನಯ್ಯನ ಖಾತೆಗೆ ಹಣ ಹಾಕಿದವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ
ಹೌದು ಈ ಒಂದು ಪ್ರಕರಣದ ಪ್ರಮುಖ ಆರೋಪಿಗಳಾದ ಚಿನ್ನಯ್ಯ ಹಾಗೂ ಆತನ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ ಹಲವರಿಗೆ ಎಸ್‌ಐಟಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.ಆರೋಪಿ ಚಿನ್ನಯ್ಯನ ಬ್ಯಾಂಕ್ ಖಾತೆಗೆ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ₹3 ಲಕ್ಷ ಹಣ ವರ್ಗಾಯಿಸಿದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಹಣದ ಮೂಲವನ್ನು ಪತ್ತೆಹಚ್ಚಲು ವಿಚಾರಣೆಗೆ ಕರೆಯಲಾಗಿದೆ.
ಚಿನ್ನಯ್ಯನ ಬ್ಯಾಂಕ್ ಖಾತೆಯ ವಿವರಗಳನ್ನು ಈಗಾಗಲೇ ಪಡೆದಿರುವ ಎಸ್ಐಟಿ, ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ಹಣ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಜಮೆಯಾಗಿರುವುದನ್ನು ಪತ್ತೆ ಹಚ್ಚಿದೆ. ಈ ಹಣಕಾಸು ವ್ಯವಹಾರಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳುವ ಮೂಲಕ ಪ್ರಕರಣದ ವ್ಯಾಪ್ತಿ ಮತ್ತು ಸಂಬಂಧಿಕರ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಲು ಎಸ್ಐಟಿ ಮುಂದಾಗಿದೆ.