ದಕ್ಷಿಣ ಕನ್ನಡ : ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.
ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಧರ್ಮಸ್ಥಳದಲ್ಲಿ ನೇತ್ರಾವತಿ ಪಾಂಗಳದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ಕೇಸ್ ಗಳು ದಾಖಲಾಗಿವೆ.
ಸ್ಥಳದಲ್ಲಿದ್ದ ಪೊಲೀಸರ ದೂರು ಆಧರಿಸಿ 4 ಎಫ್ಐಆರ್ ದಾಖಲಾಗಿದೆ. 3 ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ ಕೂಟ ಕಟ್ಟಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 50-100 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.