ಧಾರವಾಡ : ಹಸುವಿನ ಮೈ ತೊಳೆಯಲು ಕೆರೆಯಲ್ಲಿ ನೀರಿಗೆ ಇಳಿದಿದ್ದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿಸರಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಜ್ಜಯ್ಯ ಹಿರೇಮಠ (15) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ದೀಪಾವಳಿ ಹಬ್ಬದ ಅಂಗವಾಗಿ ಅಜ್ಜಯ್ಯ ಹಸುವಿನ ಮೈತೊಳೆಯಲು ಗ್ರಾಮದ ಬಸ್ ನಿಲ್ದಾಣ ಸಮೀಪದ ಕೆರೆಗೆ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಜ್ಜಯ್ಯ ಹಿರೇಮಠ ಗ್ರಾಮದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಎನ್ನಲಾಗುತ್ತಿದೆ. ದೀಪಾವಳಿ ಹಬ್ಬದ ವೇಳೆ ಸಂಭ್ರಮ ಪಡುವ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಮೃತ ದೇಹವನ್ನು ಹೊರಗಡೆ ತೆಗೆದಿದ್ದಾರೆ.