ನವದೆಹಲಿ : ಬೆಲ್ಜಿಯಂನಲ್ಲಿ ತಲೆಮರೆಸಿಕೊಂಡಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಪೊಲೀಸರು ಬಂಧಿಸಿದ್ದು, ಶೀಘ್ರವೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ಕೇಸ್ ಗೆ ಸಂಬಂಧಿಸಿದಂತೆ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಇದೀಗ ಬೆಲ್ಜಿಯಂ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ಬರೋಬ್ಬರಿ 13,500 ಕೋಟಿ ರೂ. ಹಣ ಸಾಲ ಪಡೆದು ವಂಚನೆ ಮಾಡಿ ಭಾರತ ಬಿಟ್ಟು ಪರಾರಿಯಾಗಿದ್ದ ಚೋಕ್ಸಿ ಹಲವು ವರ್ಷಗಳಿಮದ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ.