ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ ಕಳೆದ 12 ದಿನಗಳಿಂದ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇಂದು ಬಂಟ್ವಾಳ ತಾಲೂಕಿನ ಸುತ್ತಮುತ್ತಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದೀಗ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಹೌದು ದಿಗಂತ್ ಗಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು.ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.
ದಿಗಂತ್ಗಾಗಿ ಪೊಲೀಸರು ಕಳೆದ 12 ದಿನಗಳಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಂಟ್ವಾಳ ಸಬ್ ಡಿವಿಜನ್ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳು. ಎಸ್.ಐ.ಗಳು ಹಾಗೂ ಸುಮಾರು 100 ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟದಲ್ಲಿ ನಿರತವಾಗಿದೆ. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದಾರೆ.
ಮೊದಲಿಗೆ ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ನದಿಯಲ್ಲೂ ಕೂಡ ಸರ್ಚ್ ಮಾಡಲಾಗುತ್ತಿದೆ.ಇದೀಗ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.