ಬೆಳಗಾವಿ : ಕಾಂಗ್ರೆಸ್ ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮಾಡಿದ್ದಾರೆ .
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎಂ.ಸಿ. ಸುಧಾಕರ್, ಶಾಸಕ ಪೊನ್ನಣ್ಣ, ಎಂ.ಎಲ್. ಸಿ ನಜೀರ್ ಸೇರಿದಂತೆ ಸಿಎಂ ಸಿದ್ದರಾಮಯ್ಯ ಆಪ್ತರಷ್ಟೇ ಭಾಗಿಯಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರಿಗೆ ಆಹ್ವಾನಿಸಿಲ್ಲ ಎಂದು ತಿಳಿದುಬಂದಿದೆ.
ಸದ್ಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿನ್ನರ್ ಮೀಟಿಂಗ್ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.








