ಬೆಂಗಳೂರು : ಕೆಡಿ ಚಿತ್ರದ ವಸರ್ಕೆ ಚುನರ ತೇರಿ ಹಾಡಿನಲ್ಲಿ ಅಶ್ಲೀಲತೆ ಆರೋಪ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಚಿತ್ರದ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 24 ಮಧ್ಯಾಹ್ನ 12:30 ಕ್ಕೆ ವಿಚಾರಣೆಗೆ ಹಾಜರಾಗಲು ಮಹಿಳಾ ಆಯೋಗ ನೋಟಿಸ್ ನೀಡಿದೆ.
ಕೇಡಿ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕ ವೆಂಕಟ್ ನಾರಾಯಣ, ನಟಿ ನೊರಾ ಫತೆಹಿ, ನಟ ಸಂಜಯ್ ದತ್ ಹಾಗೂ ರಕೀಬ್ ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ, ಆಯೋಗ ನೋಟಿಸ್ ಜಾರಿಗೊಳಿಸಿದೆ. 1990ರ NCW ಕಾಯ್ದೆಯ ಅಡಿ ಕುಯಂ ಪ್ರೇರಿತವಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ಈ ಚಿತ್ರದಲ್ಲಿ ಪ್ರಾಥಮಿಕವಾಗಿ ಲೈಂಗಿಕವಾಗಿ ಸೂಚಿಸುವ ಆಕ್ಷೇಪಾರ್ಹ ಮತ್ತು ಭಾರತೀಯ ನ್ಯಾಯ ಸಂಹಿತಾ, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿರುವ ನಿಬಂಧನೆಗಳನ್ನು ಸಿನಿಮಾ ಟೀಂ ಉಲ್ಲಂಘಿಸಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದೆ.








