ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ.
ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುತ್ತಿಗೆದಾರರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧಡೆಯಿಂದ ಗುತ್ತಿಗೆದಾರರು ಆಗಮಿಸಿದ್ದಾರೆ. 37,370 ಕೋಟಿ ಬಾಕಿ ಹಣ ರಾಜ್ಯ ಸರ್ಕಾರ ಉಳಿಸಿಕೊಂಡಿದೆ ಈ ನೆಲೆಯಲ್ಲಿ ಬೆಂಗಳೂರಿನ ಪ್ರದಂ ಪಾರ್ಕ್ ನಲ್ಲಿ ರಾಜ್ಯದ ವಿವಿಧತೆಯಿಂದ ಗುತ್ತಿಗೆದಾರರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ ಪ್ರತಿಭಟನಾ ನಿರದ ಗುತ್ತಿಗೆದಾರರ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಸ್ಥಳಕ್ಕೆ ತೆರಳಿ ಗುತ್ತಿಗೆದಾರರೊಂದಿಗೆ ಚರ್ಚಿಸುತ್ತಿದ್ದಾರೆ ಅವರ ಜೊತೆಗೆ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಕೂಡ ಪ್ರತಿಭಟನೆ ಸ್ಥಳಕ್ಕೆ ತೆರಳಿ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿದ್ದಾರೆ. ಗುತ್ತಿಗೆದಾರರನ್ನು ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.








