ಹುಬ್ಬಳ್ಳಿ : ಜನವರಿ 24ರಂದು ಸರ್ಕಾರದಿಂದ 42,345 ಮನೆಗಳ ಹಂಚಿಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ಕನ್ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಮನೆಗಳ ಹಂಚಿಕೆ ಮಾಡಲಾಗುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದು ಮನೆ ಕೂಡ ನೀಡಲಿಲ್ಲ ಬಡವರ ಮನೆಗೆ ಕೇಂದ್ರ ಸರ್ಕಾರ ಶೇಕಡ 18ರಷ್ಟು ಜಿಎಸ್‌ಟಿ ಹಾಕುತ್ತಿದೆ. 2024 ರಲ್ಲಿ ನಾವು 36,789 ಮನೆಗಳನ್ನು ನೀಡಿದ್ದೆವು . ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಬಡವರಿಗೆ ಮನೆಗಳನ್ನು ನೀಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳು ಇರಲಿಲ್ಲ ಆದರೂ ಬಿಜೆಪಿಯವರು ಬಡವರಿಗೆ ಒಂದೇ ಒಂದು ಮನೆ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.








